ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ

ಸಮಗ್ರ ನ್ಯೂಸ್: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.

Ad Widget ... ..

ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

Ad Widget

ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.

Leave a Comment

Your email address will not be published. Required fields are marked *