Ad Widget .

ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ… ಈ ನಿಲ್ದಾಣದಲ್ಲಿ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಭಾನುವಾರ (ಮಾರ್ಚ್.09) ಅಂದರೆ ನಾಳೆ ಬೆಂಗಳೂರಿನ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

Ad Widget . Ad Widget . Ad Widget . Ad Widget .

ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗುತ್ತದೆ ಎಂದು ತಿಳಿಸಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ.

Ad Widget . Ad Widget .

ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ, ನೇರಳೆ ಮಾರ್ಗದಿಂದ ಹಸಿರು ಮಾರ್ಗಕ್ಕೆ ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್ ಟಿಕೆಟ್ ಹಾಗೂ ಟೋಕನ್ಗಳನ್ನು ಖರೀದಿಸದಂತೆ ಬಿಎಂಆರ್ಸಿಎಲ್ ಸೂಚಿಸಿದೆ. ಇನ್ನೂ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮಯ ಬೆಳಿಗ್ಗೆ 7.00 ಗಂಟೆಗೆ ಪ್ರಾರಂಭವಾಗುತ್ತವೆ.

Leave a Comment

Your email address will not be published. Required fields are marked *