ಹವಾಮಾನ ವರದಿ| ನಾಳೆಯಿಂದ‌ ರಾಜಧಾನಿ ಬೆಂಗಳೂರು ಸೇರಿದಂತೆ ‌ರಾಜ್ಯದ‌ ಹಲವಡೆ‌ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

. Ad Widget . Ad Widget

ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ.

. Ad Widget . . Ad Widget . Ad Widget

ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾ.11 ರಿಂದ ಮಾರ್ಚ್ 14 ರವರೆಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ. ಮಂಡ್ಯ, ಮೈಸೂರು, ಕೊಡಗು ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *