ಕೊಡಗು ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ| ಆತಂಕದ ವಾತಾವರಣ ಸೃಷ್ಟಿ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

Ad Widget . Ad Widget .

ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ. ಅದೃಷ್ಟವಶಾತ್‌ ಯಾವುದೇ ರೀತಿಯ ಹಾನಿ ಹಾಗೂ ಸಾವು-ನೋವು ಸಂಭವಿಸಿಲ್ಲ. ಭೂಮಿ ಕಂಪಿಸಲು ಕಾರಣಗಳೇನು ಎಂಬುದನ್ನು ಭೂವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget . Ad Widget .

ಮಡಿಕೇರಿ ಸಮೀಪದ ದೇವಸ್ತೂರು ಭಾಗದಲ್ಲೂ ಇದೇ ಅನುಭವ ಆಗಿದೆ. ಮನೆಯಲ್ಲಿನ ವಸ್ತುಗಳು ಅಲ್ಲಾಡಿವೆ ಎಂದು ಜನರು ತಿಳಿಸಿದ್ದಾರೆ. ಈ ಗ್ರಾಮದ ಜನರು 2018ರಲ್ಲೂ ಇದೇ ಅನುಭವ ಅನುಭವ ಆಗಿತ್ತು ದಮದು ತಿಳಿಸಿದ್ದರು. ಇದಾದ ನಂತರ ಜಿಲ್ಲೆ ಹಲವೆಡೆ ಭೂಕಂಪನದ ಜೊತೆಗೆ ಭೂ ಕುಸಿತವೂ ಉಂಟಾಗಿತ್ತು ಎಂದು ಜನರು ಅನುಭವ ಹಂಚಿಕೊಂಡಿದ್ದಾರೆ. ಆದರೆ, ಈ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ. ಗೋಡೆಗಳಲ್ಲಿ ಬಿರುಕು, ಸಾಮಗ್ರಿ ಬೀಳುವುದು ಯಾವುದೇ ಅವಘಡ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *