ಚಿಕ್ಕಮಗಳೂರು:ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲಾಡಳಿತವು ಪ್ರವಾಸಿಗರ ಪ್ರವೇಶವನ್ನು ಮಾರ್ಚ್ 15 ರಿಂದ 17 ರವರೆಗೆ ತಾತ್ಕಾಲಿಕವಾಗಿ ನಿರ್ಬಂಧನೆಯನ್ನು ಹೊರಡಿಸಿದೆ.

Ad Widget ... ..

ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ.

Ad Widget

ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.

ಸ್ಥಳೀಯ ನಿವಾಸಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಉರುಸ್ ಹಬ್ಬಕ್ಕೆ ಆಗಮಿಸುವ ಭಕ್ತಾದಿಗಳ ಭಾರೀ ವಾಹನಗಳ ಸಂಚಾರವನ್ನು ಕೂಡ ನಿರ್ಬಂಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *