ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿ ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ.
ಚೌಡಯ್ಯ(70), ಭರತ್(13) ಮತ್ತು ಧನುಷ್(10) ಮೃತರು. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ಇಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ. ಮೃತರನ್ನು ಟಿ. ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎಂದು ಗುರುತಿಸಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.