ಸಮಗ್ರ ನ್ಯೂಸ್: ರಾಜ್ಯದಲ್ಲಿ ಖೋಟಾ ನೋಟುಗಳು ಜಾಲ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಯಚೂರಿನಲ್ಲಿ ಸಕ್ರಿಯವಾಗಿ ತೊಡಗಿದ್ದ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಪಿಸಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರಿನ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಖೋಟಾ ನೋಟು ಮುದ್ರಿಸಲಾಗುತ್ತಿದೆ ಎಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಲಕ್ಷಾಂತರ ಮೌಲ್ಯದ ಖೋಟಾ ನೋಟು ಹಾಗೂ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಪೇಪರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಈ ದಾಳಿಯಲ್ಲಿ ರಾಯಚೂರು ಶಸ್ತ್ರಾಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ ಸೇರಿದಂತೆ ರಮೇಶ್, ಆದಿ, ಶಿವಲಿಂಗ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.