ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ, ಮಲೆನಾಡು, ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಹಾಗೂ ತೀವ್ರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
IMD ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಜೊತೆಗೆ, ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪಬಹುದು. ಅಲ್ಲದೆ, ಕೆಲವು ಪ್ರದೇಶಗಳಲ್ಲಿ ಚದುರಿದ ರೀತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಬಂದಿರುವುದರಿಂದ ಮತ್ತು ಮೋಡ ಕವಿದ ವಾತಾವರಣ ಇರುವುದರಿಂದ ದಕ್ಷಿಣ ಕರ್ನಾಟಕದಲ್ಲಿ ಬಿಸಿಲು ಕಡಿಮೆಯಾಗಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆ ಬರಬಹುದು. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ತೀವ್ರ ಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಾಗಿರುವ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.