ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೈದ ಪತ್ನಿ.. ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿ ಭೀಕರ ಹತ್ಯೆ

ಸಮಗ್ರ ನ್ಯೂಸ್ : ದಿನನಿತ್ಯ ಒಂದಲ್ಲ ಒಂದು ವಿಚಿತ್ರ ಘಟನೆ ನಡೆಯುತ್ತಲೆ ಇರುತ್ತದೆ. ಈ ಹಿಂದೆ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೊಲೆ ಕೇಸ್ ನಡೆದಿತ್ತು ಅದು ಮಾಸುವ ಮುನ್ನವೇ ಇದೀಗ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ನೌಕಾಧಿಕಾರಿ ಗಂಡನ ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಬೆಳಕಿಗೆ ಬಂದಿದೆ.

Ad Widget .

ಐದು ವರ್ಷದ ಮಗಳ ಹುಟ್ಟುಹಬ್ಬ ಆಚರಿಸಲು ಮೀರತ್‌ಗೆ ಬಂದಿದ್ದ ನೌಕಾಧಿಕಾರಿ ಸೌರಭ್ ಕುಮಾರ್ ಎಂಬಾತನನ್ನು, ಆತನ ಪತ್ನಿಯೇ ಪ್ರಿಯಕರನ ನೆರವಿನಿಂದ ಕೊಂದು ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದಾಳೆ. ಅಚ್ಚರಿ ಎಂದರೆ ಈ ವಿಚಾರವನ್ನು ಆಕೆಯ ತಾಯಿಯೇ ಬಹಿರಂಗ ಮಾಡಿದ್ದಾರೆ .

Ad Widget . Ad Widget .

ಸೌರಭ್ ಕುಮಾರ್ ಮತ್ತು ಮುಸ್ಕಾನ್ 2016 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಸೌರಭ್ ತನ್ನ ಮೀರತ್‌ನ ಪಕ್ಕದ ಮನೆಯ ನಿವಾಲಿಯಾಗಿದ್ದ ಮುಸ್ಕಾನ್‌ಳನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯ ನಂತರ ಮರ್ಚೆಂಟ್ ನೇವಿಯಲ್ಲಿ ಕೆಲಸ ಪಡೆದಿದ್ದ. ಆದರೆ ಒಂದು ವರ್ಷದ ಬಳಿಕ ಆ ಕೆಲಸವನ್ನು ತೊರೆದ ಸೌರಭ್, ಮೀರತ್‌ನ ದೆಹಲಿ ರಸ್ತೆಯ ಒಂದು ಪ್ಲೈವುಡ್ ಅಂಗಡಿಯಲ್ಲಿ ಮೂರು ವರ್ಷ ಕೆಲಸ ಮಾಡಿದ್ದ. ಆ ನಂತರ ಲಂಡನ್‌ಗೆ ತೆರಳಿ ಅಲ್ಲಿನ ಒಂದು ಮಾಲ್‌ನಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಸೌರಭ್ ಮತ್ತು ಮುಸ್ಕಾನ್ ಜೋಡಿಗೆ ಐದು ವರ್ಷದ ಪಿಹು ಎಂಬ ಮಗಳಿದ್ದಳು. ಮೀರತ್‌ನ ಇಂದಿರಾನಗರದಲ್ಲಿ ಓಂಪಾಲ್ ಎಂಬವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಜೋಡಿ ಬಾಡಿಗೆಗೆ ವಾಸಿಸುತ್ತಿದ್ದರು.

ಕೊಲೆಗೆ ನಡೆದಿತ್ತು ಮಾಸ್ಟರ್ ಪ್ಲಾನ್

ಸೌರಭ್ ಕೊಲೆಗೆ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಭರ್ಜರಿ ತಯಾರಿ ನಡೆಸಿದ್ದರಂತೆ. ಮಾರ್ಚ್ 4 ರ ರಾತ್ರಿ, ಸೌರಭ್‌ಗೆ ಮಾದಕ ದ್ರವ್ಯ ಕುಡಿಸಿದ ಬಳಿಕ ಎದೆಗೆ ಚಾಕುವಿನಿಂದ ಇರಿದು, ಗಂಟಲು ಸೀಳಿ ಕೊಲೆ ಮಾಡಿದ್ದಾರೆ. ಕೊಲೆಗೆ ಮುನ್ನ ಚಾಕುಗಳು, ಬ್ಲೇಡ್‌ಗಳು ಮತ್ತು ದೊಡ್ಡ ಪಾಲಿಥಿನ್ ಚೀಲಗಳನ್ನು ಖರೀದಿಸಿ ಯೋಜನೆ ಸಿದ್ಧಪಡಿಸಲಾಗಿತ್ತು. ಕೊಲೆಯಾದ ಬಳಿಕ ಶವವನ್ನು ಬಾತ್ ರೂಂ ಎಳೆದುಕೊಂಡು ಹೋಗಿ, ಇಬ್ಬರೂ ಸೇರಿ ದೇಹವನ್ನು 15 ತುಂಡುಗಳಾಗಿ ಕತ್ತರಿಸಿದ್ದಾರೆ. ಈ ಸಮಯದಲ್ಲಿ ಸ್ನಾನಗೃಹದಿಂದ ರಕ್ತ ಚರಂಡಿಗೆ ಹರಿಯುತ್ತಿತ್ತು. ಕೈಕಾಲುಗಳನ್ನು ಕತ್ತರಿಸಿ, ದೇಹದ ಭಾಗಗಳನ್ನು ಪಾಲಿಥಿನ್ ಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು.

ಕೊಲೆ ಬಳಿಕ ಸಾಹಿಲ್ ದೇಹವನ್ನು ಮುಚ್ಚಿಡಲು ದೊಡ್ಡ ಡ್ರಮ್ ತಂದಿದ್ದ. ಅಲ್ಲದೆ ಒಂದು ಚೀಲ ಸಿಮೆಂಟ್, ಮಣ್ಣು ಮತ್ತು ಕಟ್ಟಡ ನಿರ್ಮಾಣಕ್ಕೆ ಬಳಸುವ ಡಸ್ಟ್ ಅನ್ನು ಶೇಖರಿಸಿಟ್ಟಿದ್ದ. ದೇಹದ ತುಂಡುಗಳನ್ನು ಡ್ರಮ್‌ನಲ್ಲಿ ತುಂಬಿಸಿ, ನೀರು ಸುರಿದು ಸಿಮೆಂಟ್ ಮತ್ತು ಡಸ್ಚ್ ಹಾಕಿ ಅದನ್ನು ಮುಚ್ಚಿದ್ದ. ಇದೇ ಡ್ರಮ್ ನಲ್ಲಿ ಸೌರಭ್ ದೇಹ ಕತ್ತರಿಸಲು ಬಳಸಲಾಗಿದ್ದ ಚಾಕು, ಕತ್ತಿಗಳನ್ನು ಕೂಡ ಹಾಕಿ ಸಿಮೆಂಟ್ ನಿಂದ ಸೀಲ್ ಮಾಡಲಾಗಿತ್ತು. ಸೌರಭ್ ಕೊಲೆಯ ನಂತರ ಮುಸ್ಕಾನ್ ತನ್ನ ಮನೆಗೆ ಬೀಗ ಹಾಕಿ ಐದು ವರ್ಷದ ಮಗಳು ಪಿಹುವನ್ನು ತನ್ನ ಹೆತ್ತವರ ಮನೆಯಲ್ಲಿ ಬಿಟ್ಟು, ಪ್ರಿಯಕರ ಸಾಹಿಲ್ ಜೊತೆ ಶಿಮ್ಲಾಕ್ಕೆ ಪರಾರಿಯಾಗಿದ್ದಳು. ಅಲ್ಲಿ ಪ್ರಿಯಕರನೊಂದಿಗೆ ಸಮಯ ಕಳೆದಿದ್ದಾಳೆ. ಇದೇ ಹೊತ್ತಲ್ಲೇ ಮುಸ್ಕಾನ್ ಗೆ ಹಣದ ಅವಶ್ಯಕತೆ ಎದುರಾಗಿದೆ.

ಆಗ ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಜೊತೆ ಸೌರಭ್ ಖಾತೆಯಿಂದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅದು ಯಶಸ್ವಿಯಾಗಲಿಲ್ಲ. ಇದಾದ ನಂತರ ಮುಸ್ಕಾನ್ ತನ್ನ ತಾಯಿಯನ್ನು ಸಂಪರ್ಕಿಸಿ ಹಣ ಕೇಳಿದ್ದಾಳೆ. ತಾಯಿ ಸೌರಭ್ ಬಗ್ಗೆ ಕೇಳಿದಾಗ, ಮುಸ್ಕಾನ್ ಅನುಮಾನಾಸ್ಪದ ಉತ್ತರ ನೀಡಿದ್ದಾಳೆ. ಈ ವೇಳೆ ಅವರ ತಾಯಿ ಗದರಿ ಕೇಳಿದಾಗ ಮುಸ್ಕಾನ್ ಕೊಲೆ ವಿಚಾರ ಬಾಯಿ ಬಿಟ್ಟಿದ್ದಾಳೆ. ತಕ್ಷಣ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮುಸ್ಕಾನ್ ಳನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿದಾಗ, ಆಕೆ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ. ಇದೀಗ ಇಬ್ಬರನ್ನೂ ಪೊಲೀಸರು ವಶ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *