ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ವ್ಯವಸ್ಥಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 21 ರ ನಾಳೆಯಿಂದ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ. 2024-25ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1 ಮಾ. 21ರಿಂದ ಎ. 4ರ ವರೆಗೆ ನಡೆಯಲಿದ್ದು 8,96.447 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Ad Widget .

ಎಸೆಸೆಲ್ಸಿ ಪರೀಕ್ಷೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಇರಲಿದ್ದು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಲಿದ್ದಾರೆ. ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಪರಿಗಣಿಸಿ ಜೆರಾಕ್ಸ್‌, ಸೈಬರ್‌, ಕಂಪ್ಯೂಟರ್‌ ಕೇಂದ್ರಗಳನ್ನು ಮುಚ್ಚಿಸಲಾಗುತ್ತದೆ.

Ad Widget . Ad Widget .

ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯ್ದೆ ನಿಯಮಗಳಡಿ ಅಗತ್ಯವಾದ ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ.

ಎಸೆಸೆಲ್ಸಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು, 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

2,818 ಸ್ಥಾನಿಕ, ಜಿಲ್ಲಾ ಹಂತದಲ್ಲಿ 410, ತಾಲೂಕು ಹಂತದಲ್ಲಿ 1,662 ವಿಚಕ್ಷಣ ದಳವನ್ನು ಪರೀûಾ ಭದ್ರತೆ ದೃಷ್ಟಿಯಿಂದ ನೇಮಿಸಲಾಗಿದೆ. 1,117 ಪ್ರಶ್ನೆಪತ್ರಿಕೆ ವಿತರಣ ಮಾರ್ಗಗಳನ್ನು ನಿಗದಿ ಮಾಡಲಾಗಿದೆ. 65 ಸಾವಿರ ಮೌಲ್ಯಮಾಪಕರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಂಡಳಿ ಅಧ್ಯಕ್ಷ ಬಸವ ರಾಜೇಂದ್ರ ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *