ಸಮಗ್ರ ನ್ಯೂಸ್: ರಾಜ್ಯದಲ್ಲಿ ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು ಕೂಡ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದರು.
ಕೆಲವರು ಹನಿಟ್ರ್ಯಾಪ್ ಅನ್ನು ಬಂಡವಾಳ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ಕಡಿವಾಣ ಹಾಕಬೇಕು. ಅಲ್ಲದೆ ನಮ್ಮಲ್ಲಿ ಒಬ್ಬ ಸಚಿವರ ವಿಕೆಟ್ ಬೀಳಿಸಲು ಯತ್ನಿಸಲಾಗುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಈ ಕುರಿತು ಗೃಹ ಸಚಿವರ ಜೊತೆಗೆ ಮಾತನಾಡಿ ಸೂಕ್ತವಾದಂತಹ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ ಎಂದು ಅವರು ತಿಳಿಸಿದರು.