ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.
ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತ್ರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲೀಂ ಮೀಸಲಾತಿ ಮಸೂದೆ ಸೇರಿದಂತೆ
ವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.
ಈ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಬಿಜೆಪಿಯ ದೊಡ್ಡಮಗೌಡ ಪಾಟೀಲ್, ಅಶ್ವತ್ಥನಾರಾಯಣ, ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಬಿಪಿ ಹರೀಶ್, ಧೀರಜ್ ಮುನಿರಾಜ್, ಶರಣು ಸಲಗರ, ಬಿ ಸುರೇಶ್ ಗೌಡ, ಮುನಿರತ್ನ, ಚನ್ನಬಸವ ಸೇರಿದಂತೆ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.