ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾ. 23ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಗೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 3 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.