ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಕರುನಾಡ ಮಂದಿಗೆ ಸರ್ಕಾರ ಮಿಲ್ಕ್ ಶಾಕ್ ಕೊಡಲು ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಪಕ್ಕಾ ಆಗಿದೆ.
ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ.ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚಳ ಮಾಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಂದ ಕೆಎಂಎಫ್ ಅಧ್ಯಕ್ಷರು ಮತ್ತು ಪಶು ಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಸರ್ಕಾರದ ಅನುಮತಿ ಬಾಕಿ ಇದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನೆ ಸಚಿವ ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಹಿರಿಯ ಅಧಿಕಾರಿಗಳು, ಹಾಲು ಒಕ್ಕೂಟದ ಅಧ್ಯಕ್ಷರೊಂದಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.