ಸಮಗ್ರ ನ್ಯೂಸ್: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ನಿನ್ನೆಯಷ್ಟೇ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಶಾಕ್ ಕೊಟ್ಟಿದ್ದ ಬಿಜೆಪಿ ಹೈಕಮಾಂಡ್ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದೆ.
ಪದೇ ಪದೇ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣಕ್ಕೆ ಈ ಬೃಹತ್ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ.