ಕೊಡಗಿನಲ್ಲಿ ಭೀಕರ ಹತ್ಯಾಕಾಂಡ| ನಾಲ್ವರನ್ನು ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕಾಫಿ ತೋಟದ ಮನೆಯಲ್ಲಿ ನಾಲ್ವರನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಲಾಗಿದೆ.

Ad Widget ... ..

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದ ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಓರ್ವ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ.

Ad Widget

ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆಯಾದವರನ್ನು ಕರಿಯ, ಗೌರಿ, ನಾಗಿ, ಕಾವೇರಿ(7) ಎಂದು ಗುರುತಿಸಲಾಗಿದೆ. 35 ವರ್ಷದ ಗಿರೀಶ್ ಎಂಬಾತ ಈ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *