ಸಮಗ್ರ ನ್ಯೂಸ್: ಥೈಲ್ಯಾಂಡ್ ಭೂಕಂಪಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 144ಕ್ಕೆ ಏರಿದೆ. ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಸಾವಿನ ಸುದ್ದಿಗಳು ಏರಿಕೆಯಾಗುತ್ತಿದ್ದು, ಮತ್ತು 700 ಕ್ಕೂ ಹೆಚ್ಚು ಮಂದಿ ಗಾಯಗೊಂಡ ವರದಿಯಾಗಿವೆ. ಸಾವಿನ ಸಂಖ್ಯೆ 1000ಗಡಿ ದಾಟುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಮ್ಯಾನ್ಮಾರ್‌ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದುವು ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿದೆ ಎಂದು ವರದಿಯಾಗಿದೆ.
ಮ್ಯಾನ್ಮಾರ್‌ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದುಬಿತ್ತು, ಮತ್ತು ಮಸೀದಿ ಭಾಗಶಃ ಕುಸಿದು ಕನಿಷ್ಠ ಮೂರು ಜನರು ಸಾವನ್ನಪ್ಪಿದರು. ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದ್ದರಿಂದ ಆಸ್ಪತ್ರೆಯೊಂದು ತನ್ನನ್ನು “ಸಾಮೂಹಿಕ ಸಾವುನೋವು ಪ್ರದೇಶ” ಎಂದು ಘೋಷಿಸಿಕೊಂಡಿದೆ.
ಥೈಲ್ಯಾಂಡ್‌ನ ಹಲವಾರು ಭಾಗಗಳಲ್ಲಿಯೂ ಸಹ ಕಂಪನಗಳು ಉಂಟಾಗಿವೆ. ಭೂಕಂಪದ ನಂತರ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡ ಕುಸಿದು ಕನಿಷ್ಠ ಮೂರು ಜನರು ಸಾವನ್ನಪ್ಪಿದರು ಮತ್ತು ಡಜನ್ಗಟ್ಟಲೆ ಕಾರ್ಮಿಕರು ಸಿಲುಕಿಕೊಂಡಿದ್ದು, ಹಲವರನ್ನು ರಕ್ಷಿಸಲಾಗಿದೆ.
ಈ ನಡುವೆ ಭಾರತ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಭೂಕಂಪ ಪೀಡಿತ ದೇಶಗಳಿಗೆ ನೆರವಿನ ಹಸ್ತ ಚಾಚಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.