ಸಮಗ್ರ ನ್ಯೂಸ್: ಹೈಡ್ರೊವೀಡ್ ಗಾಂಜಾ, ಚರಸ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಅವರ ಬಳಿ ಇದ್ದ ₹9 ಲಕ್ಷ ಮೌಲ್ಯದ ಮಾದಕ ವಸ್ತು ಮತ್ತು ಇತರ ಸಾಮಗ್ರಿ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪಾಂಡೇಶ್ವರ ಸುಭಾಷ್ ನಗರದ ತೈಝೀರ್ ಇಸ್ಮಾಯಿಲ್ ಹುಸೇನ್ (23), ಶಿವಬಾಗ್ ನಿವಾಸಿ ರೋಯ್‌ಸ್ಟನ್ ಕ್ಸೇವಿಯರ್ ಲೋಬೊ (22) ಬಂಧಿತರು.
ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ತಂದು ಮಂಗಳೂರಿನಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು, ಶಿವಬಾಗ್ 5ನೇ ಕ್ರಾಸ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಅವರ ಬಳಿ ಇದ್ದ ನಿಷೇಧಿತ ₹8 ಲಕ್ಷ ಮೌಲ್ಯದ ಮಾದಕ ವಸ್ತುಗಳು, ಎರಡು ಮೊಬೈಲ್ ಫೋನ್ ಸೇರಿ ಒಟ್ಟು ₹9 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಫೀಕ್ ಕೆ.ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ, ಸಿಸಿಬಿ ಘಟಕದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.