‘ಮದುವೆಯಾಗಲು ಹುಡುಗಿ ಸಿಗದವರು ಅನ್ಯಧರ್ಮೀಯರನ್ನು ಪ್ರೀತಿಸಿ ಮದುವೆಯಾಗಿ’| ಉಳ್ಳಾಲದಲ್ಲಿ ಬಿಟ್ಟಿ ಸಲಹೆ ನೀಡಿದ ಚಕ್ರವರ್ತಿ ಸೂಲಿಬೆಲೆ
ಸಮಗ್ರ ನ್ಯೂಸ್: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಬಿಟ್ಟಿ ಸಲಹೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಅವರು ಮಾತನಾಡಿದರು. ‘ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ. ಈಗ […]