March 2025

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು , ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದಕೀಯ ಕಾಲೇಜ್ ಘೋಷಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ಧೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಾರ್ಥ್ಯದ ತಾಲೂಕು ಆಸ್ಫತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಬಜೆಟ್ […]

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬರ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ಧರ್ಮಸ್ಥಳ‌ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು ಹಿಡಿದು ಕೊಂಡೋಗಿ ಅವರಿಗೆ ಯಾವರೀತಿ ಹಿಂಸೆ ಮಾಡುತ್ತೀರಿ, ಯಾವ ಲೀಸ್ ,ನ್ಯಾಯಾಲಯದ ಎದುರು ನಿಲ್ಲಿಸುತ್ತೀರಿ ಅದಕ್ಕೆ ನಮ್ಮ ಬೆಂಬಲವಿದೆ, ಆದರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ವಿರುದ್ದ ಅವಹೇಳನ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಪುತ್ತೂರಿನಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್

ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ Read More »

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಸಮೀರ್ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿತ್ತು. “ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಗ್ಗೆ ಧಾರ್ಮಿಕ

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್ Read More »

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ… ಫಿಕ್ಸ್ ..!

ಸಮಗ್ರ ನ್ಯೂಸ್: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ಮೀಟರ್ ದರ ಏರಿಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಆಟೋ ಮೀಟರ್ ದರ ಹೆಚ್ವಳ ಮಾಡಿ ನಾಲ್ಕು ವರ್ಷ ಆಗಿದೆ. ಈಗ ಸಿಎನ್ಜಿ ಹಾಗೂ ಎಲ್ಪಿಜಿ ದರ ಹೆಚ್ಚಳವಾಗಿದೆ. ಹಾಗಾಗಿ ಬೆಂಗಳೂರು ಆಟೋ ಮೀಟರ್ ದರ ಹೆಚ್ಚಳಕ್ಕೆ ಚರ್ಚೆಗಳು ನಡೆದಿವೆ. ಕಳೆದ ವರ್ಷವೇ ಆಟೋ ಚಾಲಕ ಸಂಘಟನೆಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ದರ ಏರಿಕೆ ಮಾಡುವಂತೆ ಮನವಿ ಮಾಡಿದ್ದವು.

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ… ಫಿಕ್ಸ್ ..! Read More »

ರಾಜ್ಯದ ಜನತೆಗೆ ಮತ್ತೊಂದು ಶಾಕ್.. ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ..!

ಸಮಗ್ರ ನ್ಯೂಸ್: ಇತ್ತೀಚೆಗೆ ಎಲ್ಲದರಲ್ಲೂ ಬೆಲೆ ಏರಿಕೆ ಬಿಸಿ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ  ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ ಏರಿಕೆ ಆಗಲಿದೆ ಎಂಬ ಚರ್ಚೆ ಈಗಾಗಲೇ ಕೇಳಿ ಬರುತ್ತಿದೆ. ಅದರಂತೆ ವಿಧಾನ ಪರಿಷತ್ತಿನಲ್ಲಿ  ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪವಾಗಿದೆ. ಹಾಲು ಉತ್ಪಾದಕರಿಗೆ ಸರ್ಕಾರ 656.07 ಕೋಟಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ವಿಚಾರವಾಗಿ ಸದನದಲ್ಲಿ ಆಕ್ಷೇಪ ಶುರುವಾಯಿತು.

ರಾಜ್ಯದ ಜನತೆಗೆ ಮತ್ತೊಂದು ಶಾಕ್.. ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ..! Read More »

ಉತ್ತರಪ್ರದೇಶ, ರಾಜಾಸ್ಥಾನಕ್ಕೂ ಲಗ್ಗೆ‌ ಇಟ್ಟ‌ ‘ನಂದಿನಿ’| ಕೋ ಪ್ಯಾಕಿಂಗ್ ಮಾರಾಟ ಆರಂಭ

ಸಮಗ್ರ ನ್ಯೂಸ್: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ದೂರದ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಂದಿನಿ ಹಾಲಿನ ಕೋ-ಪ್ಯಾಕಿಂಗ್ ಮತ್ತು ಮಾರಾಟವನ್ನು ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಹಾಲು ಮಹಾಮಂಡಳದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ. ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ

ಉತ್ತರಪ್ರದೇಶ, ರಾಜಾಸ್ಥಾನಕ್ಕೂ ಲಗ್ಗೆ‌ ಇಟ್ಟ‌ ‘ನಂದಿನಿ’| ಕೋ ಪ್ಯಾಕಿಂಗ್ ಮಾರಾಟ ಆರಂಭ Read More »

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ‌ ತೇಜಸ್ವಿ ಸೂರ್ಯ

ಸಮಗ್ರ ನ್ಯೂಸ್: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಮಾರ್ಚ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ‌ ತೇಜಸ್ವಿ ಸೂರ್ಯ Read More »

ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ ‘ಧೂತ’ ಸಮೀರ್| ಎಡಿಜಿಪಿಯಿಂದ ಪೊಲೀಸ್ ಆಯುಕ್ತರು, ಸೋಶಿಯಲ್ ಮೀಡಿಯಾ ಸೆಲ್ ಗಳಿಗೆ ಪತ್ರ

ಸಮಗ್ರ ನ್ಯೂಸ್: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಂದಿಗೂ ಸಹ ಬಗೆಹರಿದಿಲ್ಲ. ಪ್ರಕರಣದಲ್ಲಿ ಪಿಎಸ್‌ಐ ಯೋಗೇಶ್ ಮಾಡಿದ ತಪ್ಪುಗಳಿಂದ ಪ್ರಕರಣಕ್ಕೆ ಯಾವುದೇ ಸಾಕ್ಷಿ ಇಲ್ಲದಂತಾಗಿದೆ. ಇನ್ನು ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತೋಷ್ ಎಂಬ ನಿರಪರಾಧಿಯನ್ನು ಬಂಧಿಸಿ ಇಡೀ ಪ್ರಕರಣವನ್ನು ಹಳ್ಳ ಹಿಡಿಸಿದ್ದ ಯೋಗೇಶ್ ಪ್ರಕರಣ ಇನ್ನೂ ಈ ಹಂತದಲ್ಲಿರಲು ಕಾರಣ. ಹೀಗೆ ಬಗೆಹರಿಯದೇ ಉಳಿದ ಈ ಪ್ರಕರಣ ಸೌಜನ್ಯ ಹುಟ್ಟುಹಬ್ಬ ಮತ್ತು ನಿಧನ ವಾರ್ಷಿಕೋತ್ಸವದ ದಿನಗಳಂದು ಮನೆಯವರು ಹಾಗೂ

ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ ‘ಧೂತ’ ಸಮೀರ್| ಎಡಿಜಿಪಿಯಿಂದ ಪೊಲೀಸ್ ಆಯುಕ್ತರು, ಸೋಶಿಯಲ್ ಮೀಡಿಯಾ ಸೆಲ್ ಗಳಿಗೆ ಪತ್ರ Read More »

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ನಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ನಲ್ಲೂ ಪರಾಕ್ರಮ ಮೆರೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟಿದೆ. ಪಾಕ್ ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಆರು ವಿಕೆಟ್‌ಗಳಿಗೆ 362 ರನ್ ಗಳಿಸಿತು. ಇದನ್ನು ಬೆನ್ನತ್ತಿದ್ದ ಆಫ್ರಿಕಾ 9 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿ ಸೋಲು ಅನುಭವಿಸಿದೆ.

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ Read More »

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಳಗಾವಿಯ ರಾಯಬಾಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತ ದುರ್ದೈವಿಗಳು. ತಾಯಿ, ಮಕ್ಕಳು ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಕ್ಷಾಳನ್ನು ರಕ್ಷಣೆ ಮಾಡಿದ್ದರು. ನಂತರ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಆಕೆಯೂ

ಬೆಳಗಾವಿ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ Read More »