March 2025

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಎರಡೂ ತಂಡಗಳು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದ್ದ ಕಾರಣ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ, ಪೂರ್ಣ […]

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ Read More »

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮಾ.4 ರ ಸಂಜೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದಾಗಿ ಸ್ಥಳೀಯ ಮಾಹಿತಿಗಳಿಂದ ತಿಳಿದುಬಂದಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಪುತ್ತೂರು ವ್ಯಾಪ್ತಿಯ

ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!! Read More »

ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಒಂದು ಮನಕಲಕುವ ಘಟನೆ ನಡೆದಿದೆ. ಹೌದು ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್​ ಆಗಿ ಸಾವನ್ನಪ್ಪಿದ್ದರು. ಹೀಗಾಗಿ ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದಾನೆ. ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್​ 3ರ ಬೆಳಗ್ಗೆ

ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ  ಮಾ.4 ರಂದು ರಕ್ತದಾನ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಯಿತು.  ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ ಡಾ .ಕೆ ಸೀತಾರಾಮ ಭಟ್ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರು ಡಾ. ದಿನೇಶ್ ಕೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ. Read More »

ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್‌

ಸಮಗ್ರ ನ್ಯೂಸ್‌: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನೋಟಿಸ್‌ ನೀಡುವ ಮೂಲಕ ಕಠಿಣ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ನೋಟಿಸ್‌ ನೀಡಿರುವ ಪೈಕಿ ವಿಧಾನಸೌಧ, ವಿಕಾಸ ಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಚೇರಿಗಳು ಕೂಡ ಒಳಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಆಸ್ತಿಗಳಿಗೆ ನೀಡುವಂತೆಯೇ ಸರ್ಕಾರಿ ಆಸ್ತಿಗಳಿಗೂ ಕೂಡ ತೆರಿಗೆ ಬಾಕಿ ಪಾವತಿಗೆ ನೋಟಿಸ್‌ ನೀಡಲಾಗುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದು, ತೆರಿಗೆ ಬಾಕಿ

ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್‌ Read More »

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್​ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ. ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್

ಕಾಸರಗೋಡು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಒಂದೇ ಕುಟುಂಬದ ಮೂವರು ದುರ್ಮರಣ Read More »

ಪುತ್ತೂರು: ಕಂಬಳದಲ್ಲಿ ಗೆದ್ದ ಅರ್ಧ‌ಭಾಗ ಚಿನ್ನ ದೇವರಿಗೆ ಸಮರ್ಪಿಸಿದ ಕೋಣಗಳ ಯಜಮಾನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 2 ‍ಪವನ್‌ ಗೆದ್ದ ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ ಅವರು, 1 ಪವನ್ ಚಿನ್ನವನ್ನು ಸೋಮವಾರ ಪುತ್ತೂರಿನ ಮಹಾಲಿಂಗೇಶ್ವರ ದೇವರಿಗೆ ಸಮರ್ಪಿಸಿದರು. ಅವರು ಚಿನ್ನ ಹಾಗೂ ದೇವಳದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ₹ 5 ಸಾವಿರ ದೇಣಿಗೆ ನೀಡಿದರು. ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಈಶ್ವರ ಬೇಡೆಕರ್,

ಪುತ್ತೂರು: ಕಂಬಳದಲ್ಲಿ ಗೆದ್ದ ಅರ್ಧ‌ಭಾಗ ಚಿನ್ನ ದೇವರಿಗೆ ಸಮರ್ಪಿಸಿದ ಕೋಣಗಳ ಯಜಮಾನ Read More »

ಅಯೋಧ್ಯೆ ರಾಮಮಂದಿರ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಮತ್ತು ಗುಜರಾತ್‌ನ ವಿಶ್ವಪ್ರಸಿದ್ಧ ಸೋಮನಾಥ ದೇಗುಲದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾದ ಶಂಕಿತ ಉಗ್ರನೊಬ್ಬನನ್ನು ಹರ್ಯಾಣ ಮತ್ತು ಗುಜರಾತ್‌ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರೀದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್‌ ರೆಹಮಾನ್‌ (19) ಎಂದು ಗುರುತಿಸಲಾಗಿದೆ. ಈತ ವಿಶ್ವದ ಕುಖ್ಯಾತ ಉಗ್ರ ಸಂಘಟನೆಯಾದ ಐಸಿಸ್‌ ನಂಟು ಹೊಂದಿದ್ದು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಸೂಚನೆಯಂತೆ ದಾಳಿಗೆ ಸಂಚು ರೂಪಿಸಲಾಗಿದ್ದ ಎಂದು ಹೇಳಲಾಗಿದೆ. ಬಂಧನದ ಬೆನ್ನಲ್ಲೇ ರೆಹಮಾನ್‌ ನೀಡಿದ ಸುಳಿವಿನ

ಅಯೋಧ್ಯೆ ರಾಮಮಂದಿರ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್ Read More »

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ| ಯುವಕ ಬಂಧನ

ಸಮಗ್ರ ನ್ಯೂಸ್: ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಪೊಲೀಸರು ಮಾ.3 ರಂದು ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27) ಬಂಧಿತ ಆರೋಪಿಗಳು. ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ| ಯುವಕ ಬಂಧನ Read More »

ಸಿಎಂ ಬದಲಾವಣೆ/ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ವೀರಪ್ಪ ಮೊಯ್ಲಿಯವರು ಸಿಎಂ ಬದಲಾವಣೆ ವಿಚಾರ ಹೇಳುವುದು ಮುಖ್ಯವಲ್ಲ. ಹೈಕಮಾಂಡ್ ಏನು ಹೇಳುತ್ತಾರೋ ಅದು ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬೇರೆ ಅವರು ಮಾತನಾಡಿದರೆ ನಾನೇನು ಮಾತನಾಡಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬದಲಾವಣೆ/ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ Read More »