March 2025

ಕರಾವಳಿ, ಜಿಲ್ಲೆಗಳಲ್ಲಿ ‌ಮುಂದುವರಿದ ಶಾಖದ ಅಲೆ| ಸುಳ್ಯ, ಕೊಕ್ಕಡದಲ್ಲಿ ಅತ್ಯಧಿಕ ತಾಪಮಾನ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಕಳೆದ 24 ಗಂಟೆಗಳಲ್ಲಿ ಸುಳ್ಯ ಮತ್ತು ಕೊಕ್ಕಡದಲ್ಲಿ 40.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಾರ್ಚ್ 2 ರವರೆಗೆ ಕರಾವಳಿ ಕರ್ನಾಟಕದಾದ್ಯಂತ ಶಾಖದ ಅಲೆಯ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಶುಕ್ರವಾರದವರೆಗೆ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಮತ್ತು ಆರ್ದ್ರತೆಯ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ […]

ಕರಾವಳಿ, ಜಿಲ್ಲೆಗಳಲ್ಲಿ ‌ಮುಂದುವರಿದ ಶಾಖದ ಅಲೆ| ಸುಳ್ಯ, ಕೊಕ್ಕಡದಲ್ಲಿ ಅತ್ಯಧಿಕ ತಾಪಮಾನ ದಾಖಲು Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ’ಗ್ರಾಜ್ಯುವೇಶನ್ ಡೇ’ ಆಚರಣೆ ಮತ್ತು ಪೋಷಕರ ಸಭೆ

ಸಮಗ್ರ ನ್ಯೂಸ್: ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗದ ಅಡ್ಕಾರ್ ಆರ್ಕೆಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ಶಾಲೆಯಿಂದ ಒಂದನೇ ತರಗತಿಗೆ  ತೆರಳಿರುವ ಯುಕೆಜಿ ವಿಥ್ಯಾರ್ಥಿಗಳಿಗೆ ಗ್ರಾಜ್ಯುವೇಶನ್ ಡೇ’ ಕಾರ್ಯಕ್ರಮ ಮತ್ತು ಪೋಷಕರ ಸಭೆ ಮಾ.1ರಂದು ನಡೆಯಿತು.   ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ., ಸಂಸ್ಥೆಯ ಅಧ್ಯಕ್ಷ ಶುಭಕರ ಬಿ.ಸಿ. ಹಾಗೂ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಕಾರ್ಯಕ್ರಮದ ಬಗ್ಗೆ ಗೀತಾಂಜಲಿ ಟಿ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಯ ಕುರಿತು ಪೋಷಕರಿಗೆ ತಿಳಿಸಿದರು ಮತ್ತು ವಿದ್ಯಾರ್ಥಿಗಳ  ಶೈಕ್ಷಣಿಕ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ’ಗ್ರಾಜ್ಯುವೇಶನ್ ಡೇ’ ಆಚರಣೆ ಮತ್ತು ಪೋಷಕರ ಸಭೆ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕನ್ನಡ ಭಾಷೆ ವಿಚಾರವಾಗಿ ಇತ್ತೀಚೆಗೆ ಸ್ವಲ್ಪ ಗೊಂದಲಗಳಿಗೆ ಎಡೆ ಮಾಡಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಉತ್ಪಾದನೆ ಮಾಡುವ ಮತ್ತು ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಕನ್ನಡ ರಾಜ್ಯೋತ್ಸವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ, ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ Read More »

ಮಾರ್ಚ್ 22ರಂದು ‘ಕರ್ನಾಟಕ ಬಂದ್ ಬಂದ್ ಬಂದ್’!

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಮರಾಠಿ ವಿಚಾರವಾಗಿ ಗಲಭೆ ನಡೆಯುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ.ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ

ಮಾರ್ಚ್ 22ರಂದು ‘ಕರ್ನಾಟಕ ಬಂದ್ ಬಂದ್ ಬಂದ್’! Read More »

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಐವರು ಸಾವು

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಟಿಪ್ಪರ್​ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಐವರು ಸಾವು Read More »

ಕುಡಿತ ಚಟದಿಂದ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಹೌದು ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟುಕೊಂಡಿರುವಂತಹ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡು ಇಡೀ ಮನೆ ಅಗ್ನಿಗಾಹುತಿಯಾಗಿದ್ದು, ಬಟ್ಟೆ, ದವಸ ಧಾನ್ಯ, ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿವೆ. ಮೈಸೂರಿನಲ್ಲಿ ಕುಡಿತದ ದಾಸನಾಗಿದ್ದ ಗುರು, ಬೆಳಗ್ಗೆಯೇ ಕುಡಿದು ಬಂದು ಮತ್ತೆ ಕುಡಿಯಲು ಹಣ ಕೇಳಿದ್ದಾರೆ. ಈ ವಿಚಾರಕ್ಕೆ ಮನೆಯವರ ಜೊತೆ ಗಲಾಟೆ ಮಾಡಿಕೊಂಡು ಬೀಡಿ ಸೇದುತ್ತಿದ್ದರು.

ಕುಡಿತ ಚಟದಿಂದ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ Read More »

ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಜನ್ಮದಿನಾಂಕ ಕಡ್ಡಾಯ

ಸಮಗ್ರ ನ್ಯೂಸ್: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು ವರರ ಹೆಸರು, ಮುಹೂರ್ತ, ದಿನಾಂಕ, ಮಂಟಪ, ಕುಟುಂಬಸ್ಥರ ಹೆಸರು, ವಿಳಾಸ ಸೇರಿದಂತೆ ಒಂದಷ್ಟು ಮಾಹಿತಿಗಳು ಇದ್ದೇ ಇರುತ್ತೆ. ಕುಲದೇವತಾ ಪ್ರಸನ್ನ, ಗುರು ಹಿರಿಯ ಆಶೀರ್ವಾದ ಹೀಗೆ ಒಂದೊಂದು ಮದುವೆ ಆಮಂತ್ರಣ ಪತ್ರಿಕೆಗಳು ಸಮುದಾಯ, ತಮ್ಮ ತಮ್ಮ ಆಚರಣೆಗೆ ಅನುಗುಣವಾಗಿ ಇರುತ್ತದೆ. ಇದರ ನಡುವೆ ಹಲವು ವಿಶೇಷ ಹಾಗೂ ಭಿನ್ನ ಮದುವೆ ಪತ್ರಿಕೆ ಮೂಲಕವೂ ಗಮನಸೆಳೆಯುತ್ತಾರೆ. ಇದೀಗ ವಧು ವರರ ಹೆಸರಿನ ಜೊತೆಗೆ ಡೇಟ್ ಆಫ್ ಬರ್ತ್ ಕಡ್ಡಾಯ. ಇದು

ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಜನ್ಮದಿನಾಂಕ ಕಡ್ಡಾಯ Read More »

ಶಾಸಕ ರಾಜು ಕಾಗೆ ಪುತ್ರಿ ಅಕಾಲಿಕ ನಿಧನ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡದ ಶಾಸಕ ರಾಜು ಕಾಗೆ ಅವರ ಪುತ್ರಿ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಮಾರ್ಚ್‌ 2ರಂದು ರಾಜು ಕಾಗೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತಪಟ್ಟ ಕೃತಿಕಾ ಭರಮಗೌಡ ಕಾಗೆ ಅವರಿಗೆ ನಾಲ್ಕು ವರ್ಷದ ಹೆಣ್ಣು ಮಗಳಿದ್ದಾಳೆ. ಬೆಂಗಳೂರು

ಶಾಸಕ ರಾಜು ಕಾಗೆ ಪುತ್ರಿ ಅಕಾಲಿಕ ನಿಧನ Read More »

ಇಂದಿನಿಂದ ಪವಿತ್ರ ರಂಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ರಂಜಾನ್ ಮಾಸದ ಉಪವಾಸ ಇಂದಿನಿಂದ ಆರಂಭವಾಗಿದೆ ಎಂದು ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್‌ಎಂ ರಶೀದ್ ತಿಳಿಸಿದ್ದಾರೆ. ರಂಜಾನ್ ಮಾಸವು ಇಸ್ಲಾಂ ಧರ್ಮದಲ್ಲಿ ಪವಿತ್ರವಾದ ಮಾಸವಾಗಿದ್ದು, ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಉಪವಾಸ ವ್ರತವನ್ನು ಆಚರಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ.

ಇಂದಿನಿಂದ ಪವಿತ್ರ ರಂಜಾನ್ ಉಪವಾಸ ಆರಂಭ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗುರು ವೃಷಭ ರಾಶಿಯಲ್ಲಿ, ಕುಜ ಮಿಥುನ ರಾಶಿಯಲ್ಲಿ, ಕೇತು ಕನ್ಯಾರಾಶಿಯಲ್ಲಿ, ರವಿ ಮತ್ತು ಶನಿ ಕುಂಭ ರಾಶಿಯಲ್ಲಿ, ಮತ್ತು ರಾಹು, ಶುಕ್ರ, ಬುಧ ಮೀನ ರಾಶಿಯಲ್ಲಿ ಸಂಚರಿಸುತ್ತಾರೆ. ಮಾರ್ಚ್‌ 9 ರಂದು ಗಜಕೇಸರಿ ಮಹಾಯೋಗವಿದೆ. ಮೇಷ ಮತ್ತು ವೃಷಭ ರಾಶಿಗಳ ಫಲಾಫಲಗಳ ವಿವರವಾದ ವಿವರಣೆ ನೀಡಲಾಗಿದೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ಫಲ ಎಂಬುದನ್ನು ವಿವರಿಸಲಾಗಿದೆ. ಯಾರಿಗೆ ಲಾಭ? ಯಾರಿಗೆ ಶುಭ? ನೋಡೋಣ… ಮೇಷ ರಾಶಿ:ರಾಶಿಯ ಅಧಿಪತಿ ಕುಜ

ದ್ವಾದಶ ರಾಶಿಗಳ ವಾರಭವಿಷ್ಯ Read More »