ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬ್ರಹ್ಮಾವರದ ಬಿರಿಯಾನಿ ಪಾಯಿಂಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ.

Ad Widget ... ..

ಮೃತರನ್ನು ಬ್ರಹ್ಮಾವರ ಎಸ್‌ಎಂಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಂಶ್ ಶೆಟ್ಟಿ(11) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಬೇಸಿಗೆ ಕ್ರೀಡಾ ಶಿಬಿರ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಂಶ್ ಶೆಟ್ಟಿ ಶಾಲೆಗೆ ಹೋಗಲು ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿದ್ದನು. ಈ ವೇಳೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು, ರಸ್ತೆಯ ತೀರಾ ಎಡಭಾಗಕ್ಕೆ ಬಂದು ವಂಶ್ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

Ad Widget

ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ತೀವ್ರ ಸ್ವರೂಪದ ರಕ್ತಗಾಯಗೊಂಡ ವಂಶ್ ಶೆಟ್ಟಿಯನ್ನು ಕೂಡಲೇ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 9.30ರ ಸುಮಾರಿಗೆ ಮೃತಪಟ್ಟರೆಂದು ತಿಳಿದು ಬಂದಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *