ನಾಳೆ ಬೆಂಗಳೂರಿನಲ್ಲಿ ಆರ್ಸಿಬಿ – ಜಿಟಿ ಮ್ಯಾಚ್.. ಮೆಟ್ರೋ ಸೇವೆ ವಿಸ್ತರಣೆ

ಸಮಗ್ರ ನ್ಯೂಸ್: ನಾಳೆ ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯ ನಡೆಯಲಿದ್ದು, ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಈ ಕಾರಣ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ

Ad Widget .

ನಾಳೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು ಎಕ್ಸ್​​ ಸಂದೇಶದಲ್ಲಿ ಬಿಎಂಆರ್​ಸಿಎಲ್ ಉಲ್ಲೇಖಿಸಿದೆ.

Ad Widget . Ad Widget .

ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *