ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಮಂಡನೆ ಆರಂಭಗೊಂಡಿದೆ. ಗೃಹಸಚಿವ ಅಮಿತ್ ಶಾ ಈ ಬಗ್ಗೆ ಮಾತನಾಡಿ ವಕ್ಫ್ ಮಸೂದೆ ಮಂಡನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

Ad Widget ... ..

ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.

Ad Widget

ಮುಸ್ಲಿಂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಚರ್ಚೆಗೆ ಕಾರ್ಯಕಲಾಪಗಳ ಸಲಹಾ ಸಮಿತಿ ಎಂಟು ಗಂಟೆಗಳ ಕಾಲಾವಕಾಶವನ್ನು ನಿಗದಿಗೊಳಿಸಿದೆ. ಅಗತ್ಯ ಬಿದ್ದರೆ ಈ ಅವಧಿ ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯೂ ಇದೆ.

ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಗೆ ಇಂದೇ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಕೇಂದ್ರ ಸರಕಾರ ತುದಿಗಾಲಲ್ಲಿ ನಿಂತಿದೆ. ಒಂದು ವೇಳೆ ಈ ಮಸೂದೆಯೇನಾದರೂ ಇಂದೇ ಲೋಕಸಭೆಯಲ್ಲಿ ಅಂಗೀಕಾರಗೊಂಡರೆ, ನಾಳೆಯೇ ಈ ಮಸೂದೆಯನ್ನು ರಾಜ್ಯಸಭೆಯಲ್ಲೂ ಮಂಡಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *