ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..!

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿಗಳು ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಇದರೊಂದಿಗೆ ಅವರು 15 ಬಾರಿ ಕರಗ ಹೊತ್ತಂತಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರಿನ ಇತಿಹಾಸ ಸಾರುವ ಐತಿಹಾಸಿಕ ಕರಗ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ. ಧರ್ಮರಾಯ ಸ್ವಾಮಿ ದೇವಸ್ಥಾನದ ಕರಗ ಮಹೋತ್ಸವಕ್ಕೆ ರಾತ್ರಿ10 ಗಂಟೆಗೆ ಧ್ವಜರೋಹಣ ಮಾಡುವುದರ ಮೂಲಕ ಚಾಲನೆ ದೊರೆಯಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇನ್ನೂ ಮುಖ್ಯವಾಗಿ ಕರಗ ನಡೆಯುವುದಕ್ಕೆ ಸಮಸ್ಯೆ ಒಂದಿತ್ತು. ಅಂದರೆ, ಕಳೆದ 4 ತಿಂಗಳಿಂದಲೂ ನಿಧಾನಗತಿಯಲ್ಲಿ ನಡೆಯುತ್ತಿದ್ದ ವೈಟ್ ಟಾಪಿಂಗ್ ಕಾಮಾಗಾರಿ. ಈ ಬಗ್ಗೆ ವರದಿಗಳು ಬಂದ ನಂತರ  ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿಸಿ ಇದೀಗ ವೈಟ್ ಟಾಪಿಂಗ್ ಕಾಮಗಾರಿ ಸಂಪೂರ್ಣವಾಗಿ ಮುಗಿದಿದೆ. ಫುಟ್ ಪಾತ್ ಕಾಮಗಾರಿ ಮಾತ್ರ ಬಾಕಿಯಿದ್ದು ಒಂದು ವಾರದಲ್ಲಿ ಆ ಕಾಮಗಾರಿಯು ಪೂರ್ಣವಾಗುವ ನಿರೀಕ್ಷೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ.

Leave a Comment

Your email address will not be published. Required fields are marked *