ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ..!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ತನ್ನ ಮೇಲೆ FIR ದಾಖಲಾಗಿದಕ್ಕೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget .

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

Ad Widget . Ad Widget .

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ್ ಸೋಮಯ್ಯ ಬರೆದಿರುವ ಡೆತ್ ನೋಟನ್ನು ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿನಯ್ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆ‌ರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಮೃತ ವಿನಯ್ ಪರ ವಕೀಲ ನಿಶಾಂತ್ ಕುಶಾಲಪ್ಪ ಮಾತನಾಡಿ, ವಿನಯ್ ಕೇಸ್ನಲ್ಲಿ ಮೂರನೇ ಆರೋಪಿ ಆಗಿದ್ದರು. ಕೇಸ್ಗೆ ತಡೆಯಾಜ್ಞೆ ಇದ್ದರೂ ನಿರಂತರ ಕಿರುಕುಳ ನೀಡಿದ್ದಾರೆ. ದೂರುದಾರ, ಇಬ್ಬರು ಶಾಸಕರ ಕಡೆಯವರು ಹಿಂಸೆ ಕೊಟ್ಟಿದ್ದಾರೆ. ಮೃತ ವಿನಯ್ ಬಗ್ಗೆ ಅವಹೇಳನಕಾರಿಯಾಗಿ ಮಾತಾಡ್ತಾರೆ. ವಿನಯ್ ಡೆತ್ನೋಟ್ನಲ್ಲಿ ಎಲ್ಲಾ ಡಿಟೈಲ್ಸ್ ಬರೆದಿದ್ದಾರೆ ಎಂದು ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *