ತವರಲ್ಲಿ ಅಬ್ಬರಿಸಿದ ಕೆಕೆಆರ್| ಸನ್ ರೈಸರ್ಸ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 80 ರನ್‌ಗಳ ಭಾರಿ ಗೆಲುವು ಸಾಧಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ಬ್ಯಾಟಿಂಗ್ ಮತ್ತು ಬೌಲಿಂಗ್ ಅಬ್ಬರಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಅಕ್ಷರಶಃ ತತ್ತರಿಸಿತು.

Ad Widget . Ad Widget . Ad Widget . Ad Widget . Ad Widget . Ad Widget .

ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ತತ್ತರಿಸಿತು. ಕ್ವಿಂಟನ್ ಡಿ ಕಾಕ್ 1 ರನ್ ಗಳಿಸಿ ಔಟಾದರೆ, ಸುನಿಲ್ ನರೈನ್ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

16 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡ ಕೆಕೆಆರ್ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆ ಮತ್ತು ಆಂಗ್‌ಕ್ರಿಶ್ ರಘುವಂಶಿ ಆಸರೆಯಾದರು. ಈ ಜೋಡಿ ಮೂರನೇ ವಿಕೆಟ್‌ಗೆ 81 ರನ್‌ಗಳನ್ನು ಕಲೆಹಾಕಿದರು. ರಹಾನೆ 27 ಎಸೆತಗಳಲ್ಲಿ 38 ರನ್ ಗಳಿಸಿದರು. ಆಂಗ್‌ಕ್ರಿಶ್ ರಘುವಂಶಿ 32 ಎಸೆತಗಳಲ್ಲಿ 50 ರನ್ ಗಳಿಸಿದರು.

ಬಳಿಕ ಜೊತೆಯಾದ ವೆಂಕಟೇಶ್ ಅಯ್ಯರ್ ಮತ್ತು ರಿಂಕು ಸಿಂಗ್ ಸನ್‌ರೈಸರ್ಸ್ ಹೈದರಾಬಾದ್‌ ಬೌಲರ್ ಗಳ ಬೆವರಿಳಿಸಿದರು. ಅಯ್ಯರ್ 29 ಎಸೆತಗಳಲ್ಲಿ 7 ಬೌಂಡರಿ 3 ಸಿಕ್ಸರ್ ಸಹಿತ 60 ರನ್ ಗಳಿಸಿದರೆ, ರಿಂಕು ಸಿಂಗ್ 17 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರು. 150-160 ರನ್ ಗಳಿಸುವ ಸ್ಥಿತಿಯಲ್ಲಿದ್ದ ಕೆಕೆಆರ್ ಇವರಿಬ್ಬರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.

201 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್‌ಗೆ ಕೆಕೆಆರ್ ವೇಗಿಗಳು ಆಘಾತ ನೀಡಿದರು. ಟ್ರಾವಿಸ್ ಹೆಡ್‌ ಕೇವಲ 4 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ 2 ರನ್ ಹಾಗೂ ಇಶಾನ್ ಕಿಶನ್ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅರೋರಾ ಮತ್ತು ಹರ್ಷಿತ್ ರಾಣಾ ಆರಂಭದಲ್ಲೇ ಕೋಲ್ಕತಾದಲ್ಲಿ ಸನ್‌ ರೈಸ್ ಆಗದಂತೆ ತಡೆದರು.

ಕೆಕೆಆರ್ ವೇಗಿಗಳ ಜೊತೆಗೆ ಸ್ಪಿನ್ನರ್ ಗಳು ಕೂಡ ಸಹಾಯ ಮಾಡಿದರು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದ ಎಸ್‌ಆರ್ ಎಚ್‌ ಕೆಕೆಆರ್ ಬೌಲಿಂಗ್ ದಾಳಿಯೆದುರು ನಿಲ್ಲಲು ಆಗಲೇ ಇಲ್ಲ. 16.4 ಓವರ್ ಗಳಲ್ಲೇ 120 ರನ್ ಗಳಿಸುಷ್ಟರಲ್ಲಿ ಆಲೌಟ್ ಆಗುವ ಮೂಲಕ 80 ರನ್‌ಗಳ ಹೀನಾಯ ಸೋಲು ಕಂಡಿತು. ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ ತಲಾ ಮೂರು ವಿಕೆಟ್ ಪಡೆದರೆ. ಆಂಡ್ರೆ ರಸೆಲ್ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ ಮತ್ತು ಸುನಿಲ್ ನರೈನ್ ತಲಾ 1 ವಿಕೆಟ್ ಪಡೆದರು.

ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿಯಿತು. 80 ರನ್‌ಗಳ ಭರ್ಜರಿ ಗೆಲುವಿನ ಮೂಲಕ 8ನೇ ಸ್ಥಾನದಲ್ಲಿದ್ದ ಕೆಕೆಆರ್ 5ನೇ ಸ್ಥಾನಕ್ಕೆ ಜಿಗಿಯಿತು.

Leave a Comment

Your email address will not be published. Required fields are marked *