2025-26ನೇ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ| ಎ.11ರಿಂದ‌ ಬೇಸಿಗೆ ರಜೆ; ಮೇ.29ರಿಂದ ಶಾಲಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ 2025-26ನೆ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಎ.11ರಿಂದ ಬೇಸಿಗೆ ರಜೆ ಆರಂಭವಾಗಲಿದೆ. ಮೇ 29ರಿಂದ ಶಾಲೆಗಳು ಪುನಾರಾರಂಭಗೊಳ್ಳಲಿವೆ.

Ad Widget ... ..

2025-26ನೆ ಸಾಲಿನ ಶಾಲಾ ಕರ್ತವ್ಯದ ದಿನಗಳ ಮೊದಲನೆ ಅವಧಿಯು ಮೇ 29ರಿಂದ ಸೆ.19ರವರೆಗೆ ಇರಲಿದೆ. ದಸರಾ ರಜೆ ಸೆ.20ರಿಂದ ಅ.7ರವರೆಗೆ ಇರುತ್ತದೆ. ಶಾಲಾ ಕರ್ತವ್ಯದ ದಿನಗಳ ಎರಡನೆ ಅವಧಿಯು ಅ.8ರಿಂದ 2026ರ ಎ.10ರವರೆಗೆ ಇರಲಿದೆ. ಬೇಸಿಗೆ ರಜೆಯು ಎ.11ರಿಂದ ಎ.28ರವರೆಗೆ ಇರುತ್ತದೆ. ಎ.14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

Ad Widget

2025-26ನೆ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 242 ದಿನಗಳ ಕಾಲ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ. ಪರೀಕ್ಷೆ ಮತ್ತು ಮೌಲ್ಯಮಾಪನಕ್ಕೆ 26 ದಿನಗಳನ್ನು ಮೀಸಲಿಡಲಾಗಿದೆ. ಪಠ್ಯೇತರ ಚಟುವಟಿಕೆಗಳಿಗೆ 22ದಿನಗಳು, ಮೌಲ್ಯಮಾಪನಾ ಮತ್ತು ಫಲಿತಾಂಶ ವಿಶ್ಲೇಷಣೆಗೆ 10 ದಿನಗಳು, ಶಾಲಾ ಸ್ಥಳೀಯ ರಜೆಗಳು 4 ದಿನಗಳ ಕಾಲ ಇರಲಿದೆ. ಬೋಧನಾ-ಕಲಿಕಾ ಪ್ರಕ್ರಿಯೆಗೆ 178 ದಿನಗಳು ಉಳಿಯಲಿವೆ.

ಎ.11ರಿಂದ ಎ.28ರವರೆಗೆ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಿದೆ. ಆದ್ದರಿಂದ ಶಾಲಾ ಮುಖ್ಯಸ್ಥರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನು ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿಯೂಟದ ಸಾಮಗ್ರಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಬೇಕು. ರಜಾ ಅವಧಿಯಲ್ಲಿ ಬರಪೀಡಿತ ತಾಲ್ಲೂಕುಗಳ ಮಕ್ಕಳಿಗೆ ಬಿಸಿಯೂಟ ನೀಡುವ ಕುರಿತು ನಿರ್ದೇಶನಾಲಯದಿಂದ ನೀಡುವ ಸೂಚನೆಗಳಂತೆ ಕ್ರಮವಹಿಸಬೇಕು. ಒಂದು ವೇಳೆ ಈ ಅವಧಿಯಲ್ಲಿ ಚುನಾವಣಾ ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸಲು ಸಂಬಂಧಿಸಿದ ಪ್ರಾಧಿಕಾರ ಕೋರಿದ್ದಲ್ಲಿ ಸಹಕರಿಸಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

Leave a Comment

Your email address will not be published. Required fields are marked *