ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.
ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆ ವರದಿಯಾಗಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನಗಳ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಬಳಿಕ ನಂತರದ 3 ದಿನಗಳಲ್ಲಿ ತಾಪಮಾನವು 2ರಿಂದ 4 ಡಿಗ್ರಿ ಸೆಲ್ಸಿಯಸ್ ಏರಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮೂರು ದಿನಗಳಲ್ಲಿ 2-3ರಷ್ಟು ತಾಪಮಾನ ಏರಿಕೆ ಕಾಣಲಿದೆ. ಉಳಿದಂತೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.