ಸುಬ್ರಹ್ಮಣ್ಯ: ತಾಯಿ – ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ| ಮಗ ಸಾವು, ತಾಯಿ ಗಂಭೀರ

ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ.

Ad Widget ... ..

ಘಟನೆಯಲ್ಲಿ ಮೃತಪಟ್ಟವರನ್ನು ನಡುಗಲ್ಲು ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ‌ ಗೌಡ ಎಂಬವರ ಮಗ ನಿತಿನ್ (32 ವ.) ಎಂದು ಗುರುತಿಸಲಾಗಿದೆ. ತಾಯಿ ಸುಲೋಚನಾ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಇಂದು ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೀಕ್ಷಾ ಎಂಬವರನ್ನು ವಿವಾಹವಾಗಿದ್ದರು. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *