ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ ಕೋರ್ಟ್ ಆವರಣದಲ್ಲೇ ಮುತ್ತಿನ ಸುರಿಮಳೆ!!

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಬೆಳ್ತಂಗಡಿ ಕೋರ್ಟ್ ಆವರಣದಲ್ಲಿಯೇ ಯುವಕನೋರ್ವನು ಮುತ್ತಿಟ್ಟ ಪ್ರಸಂಗವೊಂದು ಸಂಭವಿಸಿದೆ.

Ad Widget .

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ‌ಯಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆಗೆ ಸೋಮವಾರ ಬೆಳ್ತಂಗಡಿ ಕೋರ್ಟ್‌ನಲ್ಲಿ ವಿಚಾರಣೆಯಿತ್ತು. ಆದ್ದರಿಂದ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆತನನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಯುವಕನೋರ್ವನು ಶಾಫಿ ಬೆಳ್ಳಾರೆ ಹಣೆಗೆ ಏಕಾಏಕಿ ಮುತ್ತಿಟ್ಟಿದ್ದಾನೆ. ಇದರ ವೀಡಿಯೋ ಇದೀಗ ವೈರಲ್ ಆಗಿದೆ.

Ad Widget . Ad Widget .

Leave a Comment

Your email address will not be published. Required fields are marked *