ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ರಿಷಬ್ ಶೆಟ್ಟಿ ದಂಪತಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಾರಾಹಿ ಪಂಜುರ್ಲಿ ದೈವದ ಬಳಿ ನಟ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ದೈವ ನುಡಿದಿದೆ.
ನಾನು ಈಗ ಹೇಳಲ್ಲ, ನೋಡಿಕೊಳ್ತೇನೆ. ಹರಕೆ ಮಾಡು.. ಐದು ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ’ ಎಂದು ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ.
ಕಾಂತರ ಸಿನಿಮಾ ಶೂಟಿಂಗ್ ಸಮಯದಲ್ಲಿ ಹಲವಾರು ಸವಾಲು ಸಂಕಷ್ಟ ಎದುರಾಗಿತ್ತು. ಇದೀಗ ಅಕ್ಟೋಬರ್ 2 ರಂದು ಕಾಂತಾರ 1 ಸಿನಿಮಾ ರಿಲೀಸ್ ಆಗಲಿದೆ.