ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗಲಿದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ.
ಏಪ್ರಿಲ್ ತಿಂಗಳ ಆರಂಭದಲ್ಲಿಯೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದಾಗಿ ಕೆಲವೇ ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಮಾರಾಟವಾಗುವ ಡೀಸೆಲ್ ಬೆಲೆಯಲ್ಲಿ 4 ರೂಪಾಯಿ ಏರಿಕೆ ಆದಂತಾಗಿದೆ.