ಸಮಗ್ರ ನ್ಯೂಸ್: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ.
ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವೀಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ.
ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ. ಅಮ್ಮನನ್ನು ಕಳೆದುಕೊಂಡು ಮಗ ಒಂಟಿಯಾಗಿದ್ದಾನೆ.