ಬೆಳ್ತಂಗಡಿ: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್: ಭೀಕರ ಅಪಘಾತದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ.

Ad Widget ... ..

ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.

Ad Widget

ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *