ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ| ಕಂಬನಿ ಮಿಡಿದ ಚಿತ್ರರಂಗ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Ad Widget .

1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನಲ್ಲಿ ಜನಿಸಿದರು. 1985ರಲ್ಲಿ ಪಿತಾಮಹ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬ್ಯಾಂಕ್‌ ಜನಾರ್ಧನ್‌ ಅವರು ತಮ್ಮ ವಿದ್ಯಾಭ್ಯಾಸವನ್ನು ಬೆಂಗಳೂರಿನಲ್ಲಿಯೇ ಮುಗಿಸಿದ್ದರು. ಬಳಿಕ ರಂಗಭೂಮಿ ಕಲಾವಿದರಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿ ಗುರುತಿಸಿಕೊಂಡರು.

Ad Widget . Ad Widget .

ಬ್ಯಾಂಕ್ ಜನಾರ್ದನ್ ಅವರು ಚಿತ್ರದುರ್ಗ ಸಮೀಪದ ಹೊಳಲ್ಕೆರೆಯ ವಿಜಯ್ ಬ್ಯಾಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದವರು. ನಂತರ ನಟನೆ ಕಡೆಗೆ ಆಸಕ್ತಿ ಬೆಳೆಯಿತು. ಆರಂಭದಲ್ಲಿ ನಾಟಕ ಮಾಡಿಕೊಂಡಿದ್ದ ಅವರು, ಸಿನಿಮಾಗಳಲ್ಲಿ ಮಿಂಚಿದರು. ಹಾಸ್ಯ ಪಾತ್ರಗಳ ಮೂಲಕ ಜನಾರ್ಧನ್ ಅವರು ಗಮನ ಸೆಳೆದರು. ಬ್ಯಾಂಕ್ ಜನಾರ್ಧನ್ ಅವರು ಚಿತ್ರರಂಗಕ್ಕೆ ಬರೋಕೆ ಕಾರಣ ಆಗಿದ್ದು ಧೀರೇಂದ್ರ ಗೋಪಾಲ್ ಅವರು ಕೊಟ್ಟ ಆಫರ್. ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಕಾರಣ ಆಗಿದ್ದು, ಕಾಶೀನಾಥ್ ಅವರು. ಈ ರೀತಿ ನಟನೆಯಲ್ಲಿ ಆಸಕ್ತಿ ತೋರಿಸಿ ಅಭಿನಯಿಸಿ ಅವಕಾಶಗಳು ಹೆಚ್ಚು ಸಿಗುವುದಕ್ಕೆ ಕಾರಣವಾಗಿದೆ. ಹಾಗೆ ಚಿತ್ರರಂಗದಲ್ಲಿ ಒಳ್ಳೆಯ ಹೆಸರನ್ನು ಪಡೆದುಕೊಂಡರು.

Leave a Comment

Your email address will not be published. Required fields are marked *