ಮಹಿಳೆ ಜೊತೆ ಯುವಕನ ಅಸಭ್ಯ ವರ್ತನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಇದೀಗ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಕಂಡಾಗ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಲ್ಲದೆ, ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ. ಇದನ್ನು ಪ್ರಶ್ನಿಸಿದ ಮಹಿಳೆಯ ಪತಿ ಹಾಗೂ ಸ್ಥಳೀಯರ ಮೇಲೆ ಬೇಕಾಬಿಟ್ಟಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.  ಘಟನೆಯಲ್ಲಿ ಒಟ್ಟಾರೆ 7 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget .

ಇದೇ ಭಾನುವಾರ ಏಪ್ರಿಲ್ 13 ರಂದು ರಾತ್ರಿ 10.30 ಕ್ಕೆ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ತೆರಳುತ್ತಿದ್ದಾಗ ಎದುರು ಮನೆಯ ಕಾರ್ತಿಕ್ ಎಂಬಾತ ಎದುರು ಬಂದಿದ್ದಾನೆ. ಪ್ಯಾಂಟ್ ಬಿಚ್ಚಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಲ್ಲದೆ, ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಬರುವಂತೆ ಕರೆದಿದ್ದಾನೆ. ಕೂಡಲೇ ಮಹಿಳೆ ಆಕೆಯ ಪತಿಯನ್ನು ಕರೆದಿದ್ದಾರೆ. ಅಷ್ಟರಲ್ಲಿ ರೊಚ್ಚಿಗೆದ್ದ ಕಾಮುಕ ಹಲ್ಲೆ ನಡೆಸಿದ್ದಾನೆ.

Ad Widget . Ad Widget .

ಗಲಾಟೆ ಜೋರಾಗುತ್ತಿದ್ದಂತೆಯೇ ಸುತ್ತಲಿನ ಜನ ಆಗಮಿಸಿದ್ದಾರೆ. ಜಗಳ ಬಿಡಿಸಲು ಬಂದವರ ಮೇಲೆ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಬಳಸಿ ಕಾಮುಕ ಹಲ್ಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿಯ ಮೇಲೂ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕ ಕಾರ್ತಿಕ್ ತಾಯಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನೂ ಆರೋಪಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *