ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ.

Ad Widget .

ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ತನಗೆ ಕಿರುಕುಳ ನೀಡುತ್ತಿರುವವರ ಹೆಸರನ್ನು ರೆಕಾರ್ಡ್ ಮಾಡಿಟ್ಟು ಪ್ರವೀಣ್ ಗೌಡ ಸಾವಿಗೆ ಶರಣಾಗಿದ್ದಾರೆ.

Ad Widget . Ad Widget .

ಆನೇಕಲ್ ಪಟ್ಟಣದ ಎಸ್.ವಿ.ಎಂ.ಸ್ಕೂಲ್ ಬಳಿ ಪ್ರವೀಣ್ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ ಮಾಡಿಟ್ಟಿರುವ ವಿಡಿಯೋದಲ್ಲಿ ಕಳೆದ ಎರಡು ತಿಂಗಳಿಂದ ಮಾನಸಿಕವಾಗಿ ನೊಂದಿದ್ದೇನೆ. ನನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಅಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಹಲವರು ನೇರ ಕಾರಣ. ಸಮಂದೂರು ಕಿರಣ, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಿ ಸಾವನ್ನಪ್ಪಿದ್ದಾರೆ. ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *