ಸಮಗ್ರ ನ್ಯೂಸ್: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದು ರಾಜೀನಾಮೆ ವಿಚಾರ ತಿಳಿಸಿದ್ದಾರೆ ಎನ್ನಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಮಸ್ವಾಮಿ ಅವರು ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ದಿಢೀರನೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಸಂಚಲನ ಸೃಷ್ಟಿಸಿದೆ.
ಬಿವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ರಾಮಸ್ವಾಮಿ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದಾರೆ? ಹಾಗೂ ಮುಂದಿನ ನಡೆ ಏನು? ಎಂಬುದನ್ನೂ ಪತ್ರದಲ್ಲಿ ತಿಳಿಸಿದ್ದು, ತಮ್ಮನ್ನು ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವ ಮಾತುಗಳು ಕೂಡ ಕೇಳಿಬರುತ್ತಿವೆ.