ರಿಕ್ಕಿ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ FIR

ಸಮಗ್ರ ನ್ಯೂಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Ad Widget .

ಫೈರಿಂಗ್ ನಡೆಯುವ ಸಂದರ್ಭದಲ್ಲಿ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು ಎಂದು ವರದಿಯಾಗಿದೆ.

Ad Widget . Ad Widget .

ಯಾರಿಂದ ಈ ಫೈರಿಂಗ್ ನಡೆದಿದೆ ಎಂದು ತನಿಖೆ ನಡೆಯುತ್ತಿದೆ. ಇನ್ನೂ ತಂದೆಯ ಮೇಲಿನ ದ್ವೇಷ, ರಿಕ್ಕಿಯ ವೈಯಕ್ತಿಕ ದ್ವೇಷಕ್ಕೆ ಫೈರಿಂಗ್ ನಡೆದಿರುವ ಅನುಮಾನಗಳು ಹುಟ್ಟಿಕೊಂಡಿವೆ. ಇನ್ನೂ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ, 2ನೇ ಪತ್ನಿ ಮಕ್ಕಳ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ‌ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *