ಸಮಗ್ರ ನ್ಯೂಸ್: ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ , ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ವ್ಯಾಟಿಕನ್ ನ್ಯೂಸ್ ಟ್ವಿಟ್ಟರ್ ಪೇಜ್ ಈ ವಿಚಾರವನ್ನು ಖಚಿತಪಡಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ, ಏಪ್ರಿಲ್ 21, 2025 ರಂದು ತಮ್ಮ 88 ನೇ ವಯಸ್ಸಿನಲ್ಲಿ ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಅದು ತಿಳಿಸಿದೆ. ಅಸೋಸಿಯೇಟೆಡ್ ಪ್ರೆಸ್ ವರದಿಯ ಪ್ರಕಾರ, ವ್ಯಾಟಿಕನ್‌ನ ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫಾರೆಲ್ ಅವರು ಪೋಪ್ ನಿಧಾನದ ಸುದ್ದಿಯನ್ನು ಘೋಷಣೆ ಮಾಡಿದ್ದಾರೆ. ಪೋಪ್ ಅವರ ನಿಧನದಿಂದ ಜಗತ್ತಿನೆಲ್ಲೆಡೆ ಇರುವ ಕ್ರೈಸ್ತ ಸಮುದಾಯದಲ್ಲಿ ಶೋಕ ಮಡುಗಟ್ಟಿದೆ.