ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಮ್ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ ಇವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ್ದ 27ಕ್ಕೂ ಹೆಚ್ಚು ಪ್ರವಾಸಿಗರು ಸಾಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ, ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ, ಗೃಹ ಸಚಿವ ಅಮಿತ್ ಶಾಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇನ್ನು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಈ ಘಟನೆಗೆ ಆಕ್ರೋಶ ಹೊರಹಾಕಿದ್ದು, ಈ ದಾಳಿ ಮಾಡಿದವರು ಕ್ರೂರಿಗಳು. ನಮ್ಮ ಪ್ರವಾಸಿಗರ ಮೇಲೆ ಈ ರೀತಿಯ ದಾಳಿ ನಡೆದಿರುವುದು ಅಮಾನವೀಯ ಕೃತ್ಯ. ಗಾಯಾಳುಗಳಿಗೆ ಬೇಕಾದ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.