ನಾಲಿಗೆ ಹರಿಬಿಟ್ಟು ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ!!

ಸಮಗ್ರ ನ್ಯೂಸ್: 18 ಬಿಜೆಪಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಂದು ಶಾಸಕರ ಎಂಎಲ್‌ಎ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ. ಸ್ಪೀಕರ್ ವಿರುದ್ದ ನಾಲಿಗೆ ಹರಿಬಿಟ್ಟು ಶಾಸಕ‌ ಸ್ಥಾನವನ್ನೇ ಕಳೆದುಕೊಳ್ಳುವ ಭೀತಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಎದುರಾಗಿದೆ.

Ad Widget .

ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಆದರೆ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ ವಾಪಸ್ ಪಡೆಯಬೇಕು ಎಂಬ ಹೋರಾಟವನ್ನು ಬಿಜೆಪಿ ಮುಂದುವರೆಸಿದ್ದು ಈ ಅಮಾನತು ಆದೇಶದ ಮಧ್ಯೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಕೂಡಾ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

Ad Widget . Ad Widget .

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಡಿದ ಒಂದು ಮಾತು ಅವರ ಶಾಸಕ ಸ್ಥಾನಕ್ಕೆ ಕುತ್ತು ತಂದಿದೆ. ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಧರ್ಮದ ಕುರಿತಾದ ಹೇಳಿಕೆ ನೀಡಿದ್ದಾರೆ. ಯು.ಟಿ ಖಾದರ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಹರೀಶ್ ಪೂಂಜಾ ಅವರು ಸ್ಪೀಕರ್‌ ಮುಸ್ಲಿಂ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದರಿಂದ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಿದ್ದು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ. ಇದೀಗ ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್‌ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ

Leave a Comment

Your email address will not be published. Required fields are marked *