ಸಮಗ್ರ ನ್ಯೂಸ್: ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಜೋರಾಗಿದ್ದು, ಎರಡೂ ದೇಶಗಳು ಕೆಲವು ಒಪ್ಪಂದಗಳನ್ನು ರದ್ದುಗೊಳಿಸುವ ಮೂಲಕ ಪರಸ್ಪರ ದೇಶಗಳ ನಾಗರಿಕರಿಗೆ ವೀಸಾ ಸೇವೆಯನ್ನು ರದ್ದುಗೊಳಿಸಿವೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.
ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. “ಏಪ್ರಿಲ್ 23ರ ಬುಧವಾರ ಕರ್ತವ್ಯದಲ್ಲಿರುವಾಗ ಪಂಜಾಬ್‌ನ ಫಿರೋಜ್‌ಪುರದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ. ಸೈನಿಕನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಭೆ ಕರೆಯಲಾಗಿದೆ.” ಎಂದು ಅವರು ತಿಳಿಸಿದ್ದಾರೆ.
ಇದೀಗ ಸೈನಿಕನ ಬಿಡುಗಡೆಗೆ ಮಾತುಕತೆಗಳು ನಡೆಯುತ್ತಿವೆ. ಆದರೆ ಅವರನ್ನು ಇನ್ನೂ ಹಿಂತಿರುಗಿಸಲಾಗಿಲ್ಲ. ಅವರು ಸುರಕ್ಷಿತವಾಗಿ ಮರಳಲು ಬೇಕಾಗಿರುವ ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.