ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆ ನಡೆಸಲು ಫಿಟ್ ಎಂದ ನಿಮ್ಹಾನ್ಸ್ ವೈದ್ಯರು

ಸಮಗ್ರ ನ್ಯೂಸ್: ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದ ದಿನವೇ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ಓಂ ಪ್ರಕಾಶ್ ಮಗಳು ಕೃತಿಯ ವಿಚಾರಣೆಯನ್ನು ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂಬ ಕಾರಣಕ್ಕೆ ಮುಂದೂಡಲಾಗಿತ್ತು.

Ad Widget .

ಇದೀಗ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿದ್ದ ಪೊಲೀಸರು, ವೈದ್ಯಕೀಯ ವರದಿಯನ್ನು ಕೇಳಿದ್ದರು. ಇದೀಗ, ತನಿಖೆಗೆ ಒಳಪಡಿಸಲು ಕೃತಿ ಮಾನಸಿಕವಾಗಿ ಫಿಟ್ ಇದ್ದಾರೆ ಎಂದು ವೈದ್ಯಕೀಯ ವರದಿ ತಿಳಿಸಿದೆ. ಹೀಗಾಗಿ ಹೆಚ್ಎಸ್ಆರ್ ಲೇಔಟ್ ಪೊಲೀಸರು ಕೃತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Ad Widget . Ad Widget .

ಓಂ ಪ್ರಕಾಶ್ ಮಗಳು ಕೃತಿಯನ್ನು ಬುಧವಾರ ಬೆಳಗ್ಗೆಯಿಂದಲೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದಿದ್ದಾರೆ. ಕೃತಿಯೇ ಕೊಲೆ ಮಾಡಿದ್ದಾಳೆ ಎಂದು ಬಂಧಿಸಲು ಸಾಕ್ಷಿಗಳು ಸಿಕ್ಕಿಲ್ಲ. ಸಂಜೆಯವರೆಗೂ ವಿಚಾರಣೆ ನಡೆಸಿ ಕೇಸ್ ಫೈಲ್ ಹಸ್ತಾಂತರ ಮಾಡುವ ಮೊದಲು ಆಕೆಯನ್ನು ಮನೆಗೆ ಕಳುಹಿಸಲಾಗಿದೆ. ಜೊತೆಗೆ ಸಿಸಿಬಿ ಅಧಿಕಾರಿಗಳು ಅವಶ್ಯಕತೆ ಇದ್ದಾಗ ನೋಟಿಸ್ ನೀಡಿ ಕೃತಿಯ ವಿಚಾರಣೆ ನಡೆಸಲು ತೀರ್ಮಾನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿಸಿಬಿ ಅಧಿಕಾರಿಗಳು ಜೈಲಿನಲ್ಲಿ ಇರುವ ಪಲ್ಲವಿಯನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದಾರೆ.

Leave a Comment

Your email address will not be published. Required fields are marked *