ಉಗ್ರದಾಳಿಯನ್ನು ಸಮರ್ಥಿಸಿ ಜಾಲತಾಣದಲ್ಲಿ ಪೋಸ್ಟ್| ನಿಚ್ಚು ಮಂಗಳೂರು ಪೇಸ್ ಬುಕ್ ಪೇಜ್ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget .

ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Ad Widget . Ad Widget .

ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ. ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

Leave a Comment

Your email address will not be published. Required fields are marked *