ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಜಮ್ಮು -ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ad Widget .

ಮೈಸೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

Ad Widget . Ad Widget .

ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Leave a Comment

Your email address will not be published. Required fields are marked *