ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶಿಸಿ ಗದ್ದಲ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇದೇ ಸಂದರ್ಭದಲ್ಲಿ ಕೋಪಗೊಂಡ ಸಿಎಂ ಸಿದ್ದರಾಮಯ್ಯ, ಎಸ್ಪಿ ಅವರನ್ನು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ವೇದಿಕೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ ಶಿವಕುಮಾರ್, ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಇದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡು ವೇದಿಕೆಯತ್ತ ನುಗ್ಗಲು ಪ್ರಯತ್ನಿಸಿದ್ದರು . ಇದೇ ಸಂದರ್ಭದಲ್ಲಿ ಗೊಂದಲ ಉಂಟಾಗಿ ಭಾಷಣವೇ ಸ್ವಲ್ಪ ಕಾಲ ನಿಲ್ಲಿಸಿದ್ದರು. ಇನ್ನೂ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ವೇದಿಕೆಗೆ ಕರೆದು ತರಾಟೆ ತೆಗೆದಿದ್ದಾರೆ. ಯಾರ್ರಿ ಬೆಳಗಾವಿ ಎಸ್ಪಿ ಎಂದು ಆಕ್ರೋಶಗೊಂಡರು. ಇನ್ನೂ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಅವರನ್ನು ವಶಪಡಿಸಿ ಕರೆದುಕೊಂಡು ಹೋದ ಪೊಲೀಸ್ ವಾಹನದ ಮೇಲೆ ಮುತ್ತಿಗೆ ಹಾಕಿದ್ದಾರೆ.