ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ.

Ad Widget .

ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

ಇನ್ನೂ ಪಹಲ್ಗಾಮ್ ಪ್ರವಾಸಿಗರ ದಾಳಿ ಪ್ರಕರಣವನ್ನು
ಲಷ್ಕರ್​-ಎ-ತೊಯ್ಬಾ ಹೊಣೆ ಹೊತ್ತುಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್​ಗಳಲ್ಲಿ ಭಾರತದ ಬಗ್ಗೆ ಹಾಗೂ ನಡೆದಿರುವ ಘಟನೆಯನ್ನು ತಿರುಚುವಂತಹ ವರದಿಗಳು ಪ್ರಸಾರವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳನ್ನು ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *